೧: ಮುಳ್ಳು ಕೊನೆಯ ಮೇಲೆ ಮೂರು ಕೆರೆಯ ಕಟ್ಟಿ ಎರಡು ಬರಿದು ಒಂದು ತುಂಬಲೇ ಇಲ್ಲ
೨: ತುಂಬಲಿಲ್ಲದ ಕೆರೆಗೆ ಬಂದರು ಮೂವರೊಡ್ಡರು ಇಬ್ಬರು ಕುಂಟರು ಒಬ್ಬಗೆ ಕಾಲೇ ಇಲ್ಲ
೩: ಕಾಲಿಲ್ಲದ ಒಡ್ಡರಿಗೆ ಕೊಟ್ಟರು ಮೂರು ಎಮ್ಮೆಗಳ ಎರಡು ಬರಡು ಒಂದಕ್ಕೆ ಕರುವೇ ಇಲ್ಲ
೪: ಕರುವಿಲ್ಲದ ಎಮ್ಮೆಗೆ ಕೊಟ್ಟರು ಮೂರು ಹೊನ್ನುಗಳ ಎರಡು ಸವಕಲು ಒಂದು ಸಲ್ಲಲೇ ಇಲ್ಲ
೫: ಸಲ್ಲದ ಹೊನ್ನುಗಳಿಗೆ ಬಂದರು ಮೂರು ನೋಟಗರು ಇಬ್ಬರು ಕುರುಡರು ಒಬ್ಬಗೆ ಕಣ್ಣೇ ಇಲ್ಲ
೬: ಕಣ್ಣಿಲ್ಲದ ನೋಟಗರಿಗೆ ಕೊಟ್ಟರು ಮೂರು [...]
Filed under: ಒಗಟು, ಮ | Tagged: ಒಗಟು, ಸಮಸ್ಯೆ | No Comments »