• ದಾಸರ ದರ್ಶನ ಮಾಡಿದ ಕಂಗಳು!

  • ಪದಗಳು- ಮೊದಲ ಅಕ್ಷರದಿಂದ ಇಲ್ಲಿ ಹುಡುಕಿ

  • Top Posts

ನೀನ್ಯಾಕೋ ನಿನ್ನ ಹಂಗ್ಯಾಕೋ

ನೀನ್ಯಾಕೋ ನಿನ್ನ ಹಂಗ್ಯಾಕೋ
ಪಲ್ಲವಿ:

ನೀನ್ಯಾಕೊ ನಿನ್ನ ಹಂಗ್ಯಾಕೋ ನಿನ್ನ ನಾಮದ ಬಲವೊಂದಿದಿದ್ದರೆ ಸಾಕೋ

ಚರಣ

1:  ಕರಿ ಮಕರಿಗೆ ಸಿಕ್ಕಿ ಮೊರೆಯಿಡುತಿರುವಾಗ ಆದಿ ಮೂಲನೆಂಬ ನಾಮವೆ ಕಾಯ್ತೋ

2:  ಪ್ರಹ್ಲಾದನ ಪಿತ ಬಾಧಿಸುತಿರುವಾಗ ನರಹರಿಯೆಂಬ ನಾಮವೆ ಕಾಯ್ತೋ

3:  ಬಾಲೆಯ ಸಭೆಯಲಿ ಸೀರೆಯ ಸೆಳೆವಾಗ ಕೃಷ್ಣ ಕೃಷ್ಣ ಎಂಬ ನಾಮವೆ ಕಾಯ್ತೋ

4:  ಯಮನ ದೂತರು ಬಂದು ಅಜಾಮಿಳನೆಳೆವಾಗ ನಾರಾಯಣನೆಂಬ ನಾಮವೆ ಕಾಯ್ತೋ

5:  ಆ ಮರ ಈ ಮರ ಧ್ಯಾನಿಸುತಿರುವಾಗ ರಾಮ ನಾಮ ಎಂಬ ನಾಮವೆ ಕಾಯ್ತೋ

6:  ಹಸುಳೆ ಆ ಧ್ರುವರಾಯ ಅಡವಿಗೆ ಪೋವಾಗ ವಾಸುದೇವನೆಂಬೊ ನಾಮವೆ ಕಾಯ್ತೋ

7:  ನಿನ್ನ ನಾಮಕೆ ಸರಿ ಕಾಣೆನು ಜಗದೊಳು ಘನ್ನ ಮಹಿಮ ಸಿರಿ ಪುರಂದರ ವಿಟ್ಠಲ

Advertisements

One Response

  1. ವಿಠ್ಠಲ ಸರಿಯಾದ ಪ್ರಯೋಗ.

    ಉತ್ತಮವಾದ ಕೆಲಸ ಮಾಡುತ್ತಿದ್ದೀರಿ. ಧನ್ಯವಾದಗಳು.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s

%d bloggers like this: